ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ನೀವು ಕೂಡ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? SSP Post Matric Scholarship 2025 ಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು..? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತದೆ..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ನೀಡಲಸಗಿದೆ.
PUC, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
SSP Post Matric Scholarship 2025 ಅಗತ್ಯ ದಾಖಲೆಗಳು;
- ಆಧಾರ್ ಸಂಖ್ಯೆ
- ಇಮೇಲ್ ಐಡಿ
- ಮೊಬೈಲ್ ನಂಬರ್
- SSLC ನೋಂದಣಿ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
- ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
ಅರ್ಹತೆಗಳು:
- ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
- ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯು ಕಳೆದ ಸೆಮೆಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
- ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 2.5 ಲಕ್ಷಗಳನ್ನು ಮೀರಬಾರದು (ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ)
- ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 2 ಲಕ್ಷಗಳನ್ನು ಮೀರಬಾರದು (ಸಾಮಾನ್ಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸುಗಳು)
- ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
SSP Post Matric Scholarship 2025 ಪ್ರಮುಖ ದಿನಾಂಕಗಳು:

ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕ ವೆಬ್ ಸೈಟ್: ssp.karnataka.gov.in, ssp.postmatric.karnataka.gov.in
ಇತರೆ ಮಾಹಿತಿಗಳು:

