ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ | Karnataka SSP Scholarship 2023 For Pre Matric Students Apply Online @ssp.karnataka.gov.in

ಕರ್ನಾಟಕ ರಾಜ್ಯ ಸರ್ಕಾರ ನೀಡುವ ವಿದ್ಯಾರ್ಥಿವೇತನಕ್ಕಾಗಿ (SSP Scholarship 2023) ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿ ಪಡಿಸಲಾಗಿರುವ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರೆಸಲು ಪ್ರೋತ್ಸಾಹ ನೀಡಲು ಹಾಗೂ ವಿದ್ಯಾಭ್ಯಾಸದ ನಡುವೆ ಶಾಲೆ ಬಿಡುವುದನ್ನು ತಪ್ಪಿಸಲು ಮತ್ತು ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಉತ್ತೇಜಿಸಲು ರಾಜ್ಯ ಸರ್ಕಾರ ವಿದ್ಯಾರ್ಥಿವೇತನ (SSP Scholarship 2023) ನೀಡುತ್ತದೆ.

Karnataka SSP Scholarship 2023 ಮಾಹಿತಿ

ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೂಳಿದ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿವರ ದೊರೆತ ತಕ್ಷಣ ಮಾಹಿತಿ ನೀಡಲಾಗುವುದು.

SSP Pre Matric Scholarship 2023-24 ಅರ್ಹತೆಗಳು

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು
  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.
  • 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು.

Karnataka Scholarship 2023 ಅಗತ್ಯ ದಾಖಲೆಗಳು

ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿಗಳು ಅಥವಾ ದಾಖಲೆಗಳು ಈ ಕೇಳಗಿನಂತಿವೆ.

  • ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ (ಪಾಲಕರ)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (RD ಸಂಖ್ಯೆ ಇರುವ)

SSP Scholarship 2023 Last Date

ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಸಾಲಿಗೆ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯ ಹೆಸರುಕೊನೆಯ ದಿನಾಂಕ
ಸಮಾಜ ಕಲ್ಯಾಣ ಇಲಾಖೆ
ಅಲ್ಪಸಂಖ್ಯಾತರ ಇಲಾಖೆ31/12/2023

How To Apply SSP Scholarship 2023

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (https://ssp.karnataka.gov.in) ಮೂಲಕ ಆನ್ʼಲೈನ್ ಮೂಲಕ ಕೊನೆಯ ದಿನಾಂಕ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

SSP Pre-Matric Students Scholarship 2023 Links
ಅರ್ಜಿ ಸಲ್ಲಿಕೆ ಲಿಂಕ್‌: Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.karnataka.gov.in, dom.karnataka.gov.in, sw.kar.nic.in

ಇತರೆ ಮಾಹಿತಿಗಳನ್ನು ಓದಿ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನ

ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಉಚಿತ ಲ್ಯಾಪ್‌ಟಾಪ್‌ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

2 thoughts on “ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ | Karnataka SSP Scholarship 2023 For Pre Matric Students Apply Online @ssp.karnataka.gov.in”

Leave a Comment