ರಾಜ್ಯ ಸರ್ಕಾರದಿಂದ 5 ಲಕ್ಷ ಸಹಾಯಧನ, ಅರ್ಜಿ ಸಲ್ಲಿಸಿ | Subsidy For Digital Media Journalists 2024 @sw.kar.nic.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾಗುವ 5 ಲಕ್ಷ ಸಹಾಯಧನ ಮಾಹಿತಿಯನ್ನು ನೀಡಲಿದ್ದೇವೆ. ಯಾರು ಅರ್ಹರು, ಹೇಗೆ ಅರ್ಜಿ ಸಲ್ಲಿಸಬಹುದು ಎಂಬ ವಿವರ ಇಲ್ಲಿದೆ ಓದಿ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆ ಮಾಡಲು ಸಹಾಯಧನ (Subsidy For Digital Media) ನೀಡಲಾಗುತ್ತಿದೆ. ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5 ಲಕ್ಷಗಳ ಸಹಾಯಧನವನ್ನು ನಿಗದಿಪಡಿಸಲಾಗಿದೆ.

Subsidy For Digital Media:

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತೀದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  1. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿರಬೇಕು.
  2. ಅರ್ಜಿದಾರರು ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸವಾಗಿರಬೇಕು.
  3. ವಿದ್ಯಾರ್ಹತೆ: ಯಾವುದಾದರೂ ವಿಷಯದಲ್ಲಿ ಪದವಿ ಹೊಂದಿರಬೇಕು.
  4. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 10 ಲಕ್ಷಗಳ ಒಳಗಿರಬೇಕು.
  5. 10 ವರ್ಷಗಳ ಸೇವಾನುಭವ ಹೊಂದಿರಬೇಕು. (ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮಪಟ್ಟಿಯಲ್ಲಿ ಹೆಸರಿರುವ ಪ್ರಮುಖ ಮುದ್ರಣ ಮಾಧ್ಯಮ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ)
  6. ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ (BBMP, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬಳ್ಳಾರಿ, ಮಂಗಳೂರು, ವಿಜಯಪುರ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ) ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು.
  7. ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಯಾವುದೇ ನಿಗಮಗಳಿಂದ ಸವಲತ್ತು ಪಡೆದಿರಬಾರದು.
  8. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆಸರ್ಕಾರಿ/ನಿಗಮ, ಮಂಡಳಿ ಮತ್ತು ಕರ್ನಾಟಕ ಸರ್ಕಾರದ ಇತರೆ ಸಂಸ್ಥೆಗಳಲ್ಲಿ ಗ್ರೂಪ್ ಎ/ಗ್ರೂಪ್ ಬಿ ವೃಂದದ ಹುದ್ದೆಯಲ್ಲಿರಬಾರದು.
  9. Udyog Aadhaar Memorandum (UAM) ನೋಂದಾಯಿತವಾಗಿರಬೇಕು.
  10. ಅರ್ಜಿಯೊಂದಿಗೆ ಯೋಜನಾ ವರದಿಯನ್ನು (Project Report) ಲಗತ್ತಿಸತಕ್ಕದ್ದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಮತ್ತು ಕ್ರಮವಾಗಿ ಸಹಿಮಾಡಿದ ಅರ್ಜಿಯನ್ನು ತಮ್ಮ ಸಂಬಂಧಪಟ್ಟ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು/ ಉಪ ನಿರ್ದೇಶಕರ ಕಚೇರಿಗೆ 26.02.2024, ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು.

Subsidy For Digital Media ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: 09-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-02-2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್‌
ಅಧಿಕೃತ ವೆಬ್‌ಸೈಟ್:‌ sw.kar.nic.in, swdservices.karnataka.gov.in

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಅರ್ಜಿ ಸಲ್ಲಿಕೆ ವಿಧಾನ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

e-Shram Card ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿ

Telegram Group Join Now
WhatsApp Group Join Now

Leave a Comment

error: Content is protected !!