ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ | Tumakuru Anganwadi Worker and Helper Recruitment 2022

Telegram Group Join Now
WhatsApp Group Join Now

Tumakuru Anganwadi Worker and Helper Recruitment 2022: ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-17, ಮಿನಿ ಅಂಗನವಾಡಿ ಕಾರ್ಯಕರ್ತರು-8 ಹಾಗೂ ಅಂಗನವಾಡಿ ಸಹಾಯಕಿ-116 ಸೇರಿದಂತೆ ಒಟ್ಟು 141 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್ (Online)​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸದರಿ ಹುದ್ದೆಗಳಿಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27 ರ ಒಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬಹುದು.

ತುಮಕೂರು ಜಿಲ್ಲಾ ಅಂಗನವಾಡಿ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಗಳನ್ನು ಈ ಕೇಳಗೆ ನೀಡಲಾಗಿದೆ.

  • ಹುದ್ದೆಗಳ ಹೆಸರು – ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
  • ಇಲಾಖೆಯ ಹೆಸರು – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
  • ಒಟ್ಟು ಹುದ್ದೆಗಳ ಸಂಖ್ಯೆ – 141

Tumakuru Anganwadi Worker and Helper Recruitment 2022

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ17
ಮಿನಿ ಅಂಗನವಾಡಿ ಕಾರ್ಯಕರ್ತರು8
ಅಂಗನವಾಡಿ ಸಹಾಯಕಿ116

ವಯಸ್ಸಿನ ಅರ್ಹತೆ: ತುಮಕೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ನಿಯಮಾವಳಿಗಳಂತೆ, ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ವಿನಾಯತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಮತ್ತು ಸಂದರ್ಶನ

ಅರ್ಜಿ ಶುಲ್ಕ: ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

ವಿವರಣೆದಿನಾಂಕ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕದಿ:29-08-2022 ಬೆಳಿಗ್ಗೆ 10.00 ಗಂಟೆಯಿಂದ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಿ:27-09-2022 ಸಂಜೆ 5.30 ಗಂಟೆಯವರೆಗೆ
ಆಯ್ಕೆ ಸಮಿತಿ ಸದಸ್ಯರು ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಂದ ಎನ್.ಐ.ಸಿ ಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆದಿ:28-09-2022 ರಿಂದ ದಿ:07-10-2022 ರವರೆಗೆ
ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆಯುವುದು.ದಿ:10-10-2022
ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆದಿ:11-10-2022 ರಿಂದ ದಿ:18-10-2022
ಅವಕಾಶ ಆಕ್ಷೇಪಣೆ ಬಂದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆದಿ:19-10-2022
ದಿನ ಪರಿಶೀಲನೆ ನಂತರ ಆಯ್ಕೆ ಸಮಿತಿಯ ಸಭೆ ನಡೆಸಿ ಅಂತಿಮ ಪಟ್ಟಿಗೆ ಅನುಮೋದನೆ ಪಡೆಯುವುದು.ದಿ:20-10-2022

ಆನ್ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

  1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್)
  2. ದೃಢೀಕೃತ ಜನನ ಪ್ರಮಾಣ ಪತ್ರ/ಜನ್ಮದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ಜನ್ಮ ದಿನಾಂಕ ಇರುವ ಶಾಲಾ ಪ್ರಮಾಣ ಪತ್ರ.
  3. ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿ,
  4. ಅಭ್ಯರ್ಥಿಯು ಅದೇ ಗ್ರಾಮದಲ್ಲಿ (ನಗರ ಪ್ರದೇಶವಾಗಿದ್ದಲ್ಲಿ ಅದೇ ವಾರ್ಡ್‌ನಲ್ಲಿ) ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (03) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ,
  5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ)
  6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)
  7. ಅಭ್ಯರ್ಥಿಯು ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ,
  8. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗವಿಕಲರಾಗಿದ್ದಲ್ಲಿ ದೈಹಿಕ ಅಂಗವೈಕಲ್ಯತೆ ಶೇ.60% ಮೀರದಂತೆ ಇರುವವರು ಅರ್ಜಿ ಸಲ್ಲಿಸಬಹುದು. ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)
  9. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಗರಿಷ್ಟ 45 ವರ್ಷದ ವಯೋಮಿತಿಯೊಳಗೆ ಇರತಕ್ಕದ್ದು.
  10. ಅಭ್ಯರ್ಥಿಯು ವಿಚ್ಛೇದಿತರಾಗಿದ್ದಲ್ಲಿ, ವಿಚ್ಚೇದನಾ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
  11. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಅರ್ಜಿ ಸಲ್ಲಿಸಿದಲ್ಲಿ ಈ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
  12. ಅಭ್ಯರ್ಥಿಯು ಪರಿತ್ಯಕ್ಕೆಯಾಗಿದ್ದಲ್ಲಿ, ಪರಿತ್ಯಕ್ಕೆ ಎಂಬ ಬಗ್ಗೆ ಗ್ರಾಮ ಪಂಚಾಯತ್‌ನಿಂದ ಪಡೆದ ಪ್ರಮಾಣ ಪತ್ರ,
  13. ಅಭ್ಯರ್ಥಿಯ ಇಲಾಖೆಯ ಸುಧಾರಣಾ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿಯಾಗಿದ್ದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಕಡ್ಡಾಯ ಇರುವುದಿಲ್ಲ.
  14. ಅಭ್ಯರ್ಥಿಯು ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್​ಗಳು

ಅಧಿಕೃತ ಅಧಿಸೂಚನೆDownload ಮಾಡಿ
ಅಧಿಕೃತ ವೆಬ್‌ಸೈಟ್Apply ಮಾಡಿ

Telegram Group Join Now
WhatsApp Group Join Now

Leave a Comment