ಸ್ವಂತ ವಾಹನ ಖರೀದಿಸಲು 3 ಲಕ್ಷ ಸಬ್ಸಿಡಿ, ಹೊಸ ಅರ್ಜಿ ಆರಂಭ | Vehicle Subsidy Scheme Karnataka 2023 Apply Online @kmcdc.karnataka.gov.in

Telegram Group Join Now
WhatsApp Group Join Now

ನಮಸ್ಕಾರ, ನೀವು ಚಾಲಕರಾಗಿದ್ದೀರಾ? ಸ್ವಂತ ವಾಹನ ಕೊಂಡುಕೊಳ್ಳುವ ಬಹಯಕೆ ಇದೆಯಾ? ಹಾಗಿದ್ದರೆ ನಿಮಗಾಗಿ ಕರ್ನಾಟಕ ಸರ್ಕಾರ ನೀಡುವ ವಾಹನ ಸಬ್ಸಿಡಿ ಯೋಜನೆ (Vehicle Subsidy Scheme Karnataka) ಯ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣವಾಗಿ ಓದಿ ಯೋಜನೆಯ ಸೌಲಭ್ಯ ಪಡೆಯಿರಿ.

ಹೌದು ಸ್ನೇಹಿತರೇ, ನೀರುದ್ಯೋಗ ಸಮಸ್ಯೆಯಿಂದಾಗಿ ಅನೇಕ ಯುಜನರ ಬದುಕು ಮಂಕಾಗಿದೆ. ನಿರುದ್ಯೋಗಿಗಳಿಗಾಗಿ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸುತ್ತವೆ. ಅದಲ್ಲಿ ಸ್ವಾವಲಂಭಿ ಸಾರಥಿ ಯೋಜನೆ (Swavalambi Sarathi Karnataka) ಯು ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೂ.3 ಲಕ್ಷಗಳವರೆಗೆ ಸಹಾಯಧನ ನೀಡಲಾಗುತ್ತದೆ. ಸ್ವಾವಲಂಬಿ ಸಾರಥಿ ಯೋಜನೆಗಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಹತೆ, ಬೇಕಾಗುವ ದಾಖಲೆಗಳು, ಮತ್ತು ಇತರೆ ಮಾಹಿತಿ ಈ ಕೇಳಗಿನಂತಿದೆ.

Vehicle Subsidy Scheme Karnataka 2023 ಮಾಹಿತಿ:

ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಮೊತ್ತ: ಗರಿಷ್ಠ ರೂ. 3 ಲಕ್ಷದ ವರೆಗೆ ಅಥವಾ ಶೇ 50 ರಷ್ಟು ಸಹಾಯಧನ ನೀಡುತ್ತಾರೆ.
ಅರ್ಜಿದಾರರ ವಯಸ್ಸು: 21 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರು

2023-24ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು. ಈ ಯೋಜನೆಯ ಅಡಿಯಲ್ಲಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

Vehicle Subsidy Scheme Karnataka ಅರ್ಹತೆಗಳು:

 1. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು.
 2. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
 3. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು
 4. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು
 5. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.
 6. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ / ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.

Vehicle Subsidy Scheme Karnataka ದಾಖಲೆಗಳು:

 • ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.
 • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)
 • ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
 • ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು.
 • ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
 • ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಳಿಗೆ ಶೇ.1% ಮೀಸಲಾತಿ ಇರಿಸಿದೆ.
 • ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
 • ಲಘುವಾಹನ ಚಾಲನಾ ಪರವಾನಿಗೆ (Driving Licence)

Vehicle Subsidy Scheme Karnataka ಅರ್ಜಿ ಸಲ್ಲಿಸುವುದು ಹೇಗೆ?

ಸ್ವಾವಲಂಬಿ ಸಾರಥಿ ಯೋಜನೆಯ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ (Seva Sindhu) ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.

ವಿಶೇಷ ಸೂಚನೆ:

 • ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕು.
 • ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
 • ಆರ್ಜಿದಾರರು, ಸರ್ಕಾರದ ಹಾಗೂ ನಿಗಮದ ನಿರ್ದೇಶಕ ಮಂಡಳಿಯು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

Swavalambi Sarathi Yojana Karnataka Application:
ಆನ್‌ಲೈನ್‌ ಅರ್ಜಿ: ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ
ಅಧಿಕೃತ ವೆಬ್‌ಸೈಟ್:‌
kmcdc.karnataka.gov.in

kmcdc.karnataka.gov.in ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-10-2023

ಸಂಪರ್ಕ ವಿವರ: ನಿಗಮದ ಸಹಾಯವಾಣಿ: 8867537799/ ದೂ.ಸಂ:080–29903994
(ಬೆಳಿಗ್ಗೆ: 10 ರಿಂದ ಸಂಜೆ: 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.

ಇತರೆ ಮಾಹಿತಿಗಳನ್ನು ಓದಿ

ವಾಹನ ಖರೀದಿಸಲು 4 ಲಕ್ಷ ರೂ. ಸಹಾಯಧನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

Education Loan: ವಿದ್ಯಾರ್ಥಿಗಳಿಗೆ 3 ಲಕ್ಷದವರೆಗೆ ಶೈಕ್ಷಣಿಕ ಸಾಲ ಯೋಜನೆ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

ರೇಷನ್ ಕಾರ್ಡ್ Status ಅನ್ನು ಮೊಬೈಲ್‌ನಲ್ಲೇ ಚೆಕ್‌ ಮಾಡಿ

Telegram Group Join Now
WhatsApp Group Join Now

Leave a Comment