PUC ವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ | Vidyadhan Scholarship 2024 Karnataka For PUC Students @www.vidyadhan.org

ಎಲ್ಲರಿಗೂ ನಮಸ್ಕಾರ, ನೀವು ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರು ಅರ್ಜಿ ಸಲ್ಲಿಸಬಹುದು ಎಂದು ನಿಮಗೆ ತಿಳಿದಿಲ್ಲವೆ..? ವಿದ್ಯಾರ್ಥಿವೇತನಕ್ಕೆ (Vidyadhan Scholarship 2024) ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನೀಡಲಾಗಿದೆ ಓದಿ.

ಈ ವಿದ್ಯಾರ್ಥಿ ವೇತನವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಹಾಗೂ ಅವರ ಜೀನವನ್ನು ರೂಪಿಸಲು ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ ವಿದ್ಯಾರ್ಥಿ ವೇತನ (Vidyadhan Scholarship 2024) ವನ್ನು ನೀಡಲಾಗುತ್ತದೆ. ರಾಜ್ಯದ ಮಾನ್ಯತೆ ಪಡೆದ ಕಾಲೇಜು ಅಥವಾ ಸಂಸ್ಥೆಯಲ್ಲಿ ಪ್ರಸ್ತುತ 11 ನೇ ತರಗತಿ ಮತ್ತು 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಧನ್ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ‌.

ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ನೀಡಲಾಗುತ್ತದೆ. ನೀವು ಕೊಡ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಲಾಭ ಪಡೆಯಬಹುದು.

Vidyadhan Scholarship 2024 ಅರ್ಹತೆಗಳು:

  • ಕರ್ನಾಟಕದಲ್ಲಿ ನೆಲೆಸಿರಬೇಕು.
  • 2023 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ
  • 10 ನೇ ತರಗತಿ ಪರೀಕ್ಷೆಯಲ್ಲಿ 90% ಅಥವಾ 9 CGPA ಪಡೆದಿದ್ದಾರೆ (ಸೂಚನೆ: ವಿಕಲಾಂಗ ವಿದ್ಯಾರ್ಥಿಗಳಿಗೆ ಕಟ್-ಆಫ್ ಮಾರ್ಕ್ 75% ಅಥವಾ 7.5 CGPA ಆಗಿದೆ.)
  • ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು 2,00,000 ರೂ. ಕ್ಕಿಂತ ಕಡಿಮೆ ಇರಬೇಕು.

ದಾಖಲೆಗಳು

  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  • 10ನೇ ತರಗತಿಯ ಅಂಕಪಟ್ಟಿಯ ಸ್ಕ್ಯಾನ್ ಮಾಡಿದ ಪ್ರತಿ
  • ಆದಾಯ ಪ್ರಮಾಣಪತ್ರ.ಅಂಗವೈಕಲ್ಯ ಪ್ರಮಾಣಪತ್ರ (ಅಂಗವಿಕಲತೆ ಇದ್ದಲ್ಲಿ ಮಾತ್ರ).
  • ವಿದ್ಯಾರ್ಥಿಯ ಹೆಸರಿನ ಇ-ಮೇಲ್ ಐಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2024

ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್:‌ ಅರ್ಜಿ ಸಲ್ಲಿಸಿ
ಅಧಿಕೃತ ವೆಬ್‌ಸೈಟ್‌: www.vidyadhan.org

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30 ಜೂನ್ 2024. ವಿದ್ಯಾರ್ಥಿವೇತನ ಅರ್ಜಿಗಳು www.vidyadhan.org ವೆಬ್‌ಸೈಟ್‌ನಲ್ಲಿ ಮತ್ತು SDF VIDYA ಮೊಬೈಲ್ ಆಪ್ ಮೂಲಕ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ [email protected] ಗೆ ಮೇಲ್ ಮಾಡಬಹುದು ಅಥವಾ 9663517131 (ಸಹಾಯವಾಣಿ ಸಂಖ್ಯೆ) ಗೆ ಕರೆ ಮಾಡಬಹುದು.

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment