ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ | Vidyasiri Scholarship 2023-24 Apply Online, Last Date, Amount

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ಸರ್ಕಾರದಿಂದ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾ..? ಹಾಗಿದ್ದರೇ ಈ ಲೇಖನ ನಿಮಗೆ ಬಹುಉಪಯೋಗಿ ಆಗಬಲ್ಲದು. Vidyasiri Scholarship 2023-24 ಕುರಿತು ಮಾಹಿತಿಯನ್ನು ಈ ಕೇಳಗಿನಂತೆ ವಿವರಿಸಲಾಗಿದೆ ಓದಿರಿ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ.

ಇಲಾಖೆಯು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆ ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.

Vidyasiri Scholarship 2024 For Post Matric students

ವಿದ್ಯಾರ್ಥಿವೇತನ ಹೆಸರು: SSP ಮೆಟ್ರಿಕ್-ನಂತರದ ಕೋರ್ಸುಗಳ ವಿದ್ಯಾರ್ಥಿವೇತನ
ಇಲಾಖೆ ಹೆಸರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಂದುವರಿಸಲು ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಕರೆಯಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು‌.

Vidyasiri Scholarship Eligibility:
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ (OBC) ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಯೋಜನಗಳು:
“ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಇವು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು.

ಅಗತ್ಯ ದಾಖಲೆಗಳು:

  1. ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
  2. ಮೊಬೈಲ್‌ ಸಂಖ್ಯೆ
  3. ಇ-ಮೇಲ್ ಐ.ಡಿ.
  4. ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
  5. ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
  6. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  7. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  8. ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

How To Apply Vidya Siri Scholarship 2024 For OBC
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲೆಗೊಂದಿಗೆ SSP Scholarship Portal – https://ssp.postmatric.karnataka.gov.in ಮೂಲಕ ನಿಗದಿತ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

SSP Vidya Siri Scholarship 2024 Last Date:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-02-2024

Post Matric SSP Scholarship 2023-24 For OBC ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: https://bcwd.karnataka.gov.in, ssp.postmatric.karnataka.gov.in
ಇಲಾಖಾ ಸಹಾಯವಾಣಿ: 8050770005
ಇ-ಮೇಲ್: [email protected]
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: [email protected]
ದೂರವಾಣಿ ಸಂಖ್ಯೆ: 1902

ಇತರೆ ಮಾಹಿತಿಗಳನ್ನು ಓದಿ

SSP ಮೇಟ್ರಿಕ್‌ ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಿ

SSP Post Matric Scholarship 2024 For Minority Students

NSP ವಿದ್ಯಾರ್ಥಿವೇತನ 2024 ಅರ್ಜಿ ಆಹ್ವಾನ

Labour Department Scholarship 2023

Telegram Group Join Now
WhatsApp Group Join Now

3 thoughts on “ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ | Vidyasiri Scholarship 2023-24 Apply Online, Last Date, Amount”

Leave a Comment