ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ | Village Accountants Selection Through Competitive Examination 2022

ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ (Village Accountants Selection Through Competitive Examination) ನಡೆಸುವ ಬಗ್ಗೆ ರಾಜ್ಯ ಸರ್ಕಾರ ನಡವಳಿಗಳನ್ನು ಪ್ರಕಟಿಸಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮತ್ತು ಅವರ ಪರಿಸರದಲ್ಲಿರುವ ಎಲ್ಲಾ ಜನರ ಆರೋಗ್ಯದ ಹಿತದೃಷ್ಠಿಯಿಂದ 2020-21 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡದ ಶೇಕಡ 50 ರಷ್ಟು ಹಾಗೂ ಪ್ರಥಮ ಪಿ.ಯು.ಸಿ ಪರೀಕ್ಷೆಯಲ್ಲಿ ಪಡೆದ ಶೇಕಡ 50 ರಷ್ಟು ಅಂಕಗಳನ್ನು ಪರಿಗಣಿಸಿ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಂಕಗಳನ್ನು ನೀಡಿ ಫಲಿತಾಂಶವನ್ನು ಪ್ರಕಟಿಸುವಂತೆ ಸರ್ಕಾರದ ಆದೇಶ ಹೊರಡಿಸಿತ್ತು.

ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಬರೆಯದೆ ಉತ್ತೀರ್ಣರಾದವರುಗಳಲ್ಲಿ ಪ್ರತಿಶತ ಶೇಕಡ 100ಕ್ಕೆ 100ರಷ್ಟು ಅಂಕಗಳನ್ನು ಪಡೆದವರಾಗಿದ್ದು ಅವರುಗಳೇ ಆಯ್ಕೆಯಾಗುವುದರಿಂದ 2019-20ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಗ್ರಾಮಲೆಕ್ಕಿಗರ ಹುದ್ದೆಗೆ 2020-21ನೇ ಸಾಲಿನಲ್ಲಿ ಕೊವಿಡ್ ಕಾರಣದಿಂದ ಲಿಖಿತ ಪರೀಕ್ಷೆ ಬರೆಯದವರನ್ನು ಪರಿಗಣಿಸಬಾರದೆಂದು ಹಲವಾರು ಜಿಲ್ಲೆಗಳಿಂದ ನೇಮಕಾತಿ ಬಯಸಿರುವ ಅಭ್ಯರ್ಥಿಗಳಿಂದ ಆಕ್ಷೇಪಣೆಗಳು ವ್ಯಕ್ತವಾಗಿದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ.

ಸಲಹಾ ಸಮಿತಿಯು ಪರಿಶೀಲಿಸುವ ಅಂಶಗಳು – Village Accountants Selection Through Competitive Examination

  1. ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿಗೆ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಯಲ್ಲಿ
    ತೆಗೆದುಕೊಂಡ ಶೇಕಡವಾರು ಅಂಕಗಳ ಮೇಲೆ ನೇಮಕಾತಿಯನ್ನು ತೆಗೆದುಕೊಳ್ಳುವ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಅನುಸಾರ ನೇಮಕಾತಿ ಮಾಡಿಕೊಳ್ಳುವ ಅಂಶಗಳ ಮೇಲೆ ಸಾಧಕ/ಭಾದಕಗಳ ಕುರಿತು ಶಿಫಾರಸ್ಸು ಮಾಡುವುದು.
  2. ಕೊವಿಡ್ ಕಾಲದಲ್ಲಿ ಪರೀಕ್ಷೆಯನ್ನು ನಡೆಸಲು ದ್ವಿತೀಯ ಪಿ.ಯು.ಸಿ ಅಭ್ಯರ್ಥಿಗಳಿಗೆ ಶೇಕಡ 100ಕ್ಕೆ 100 ರಷ್ಟು ಅಂಕಗಳನ್ನು ನೀಡಿದ್ದು, ಇದು ಅಭ್ಯರ್ಥಿಗಳ ಶೈಕ್ಷಣಿಕ ವಲಯದಲ್ಲಿ ದುಷ್ಪರಿಣಾಮ ಉಂಟಾಗಿ ಜ್ಞಾನವುಳ್ಳ ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಲು ಸಾಧ್ಯವಾಗದೇ ಇರುವುದರಿಂದ ಪ್ರತಿಶತ 100ಕ್ಕೆ 100 ರನ್ಮ ನೀಡಿದ ಅಂಕಗಳ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅವರುಗಳ ಜ್ಞಾನವನ್ನು ಓರೆಗೆ ಹಚ್ಚಿ ನಂತರ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಪರಿಶೀಲಿಸುವುದು.
  3. ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯವಿದ್ದಲ್ಲಿ ಸೂಕ್ತ ತಿದ್ದುಪಡಿ ತರುವ ಬಗೆ ಪರಿಶೀಲಿಸುವುದು.

ಅದರಂತೆ, ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳನ್ನಿಯ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ಆಯ/ನೇಮಕ ಮಾಡಿಕೊಳ್ಳುವ ಬಗೆ, ಸಾಧಕ ಭಾದಕಗಳನ್ನು ಪರಿಶೀಲಿಸಿ, ತೀರ್ಮಾನ ಕೈಗೊಳ್ಳಬೇಕಾಗಿರುತ್ತದೆ.

ಆದುದರಿಂದ, ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸಾಧಕ/ ಭಾದಕಗಳನ್ನು ಪರಿಶೀಲಿಸಿ ಸಲಹೆ/ವರದಿ ನೀಡಲು ಹಾಗೂ ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆಯೂ ಸಹ ಸಲಹೆ ನೀಡಲು ಸಲಹಾ ಸಮಿತಿಯೊಂದನ್ನು ರಚಿಸುವುದು ಸೂಕ್ತವಾಗಿರುವುದನ್ನು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿರುತ್ತದೆ.

ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳಲು ಸಲಹಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ.

Download PDF

Village Accountants Selection Through Competitive Examination
Village Accountants Selection Through Competitive Examination

Leave a Comment