SDA ದಾಖಲೆಗಳ ಪರಿಶೀಲನೆ ವೇಳಾಪಟ್ಟಿ 2022

ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರು 1323 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಯ ವೇಳಾಪಟ್ಟಿಯನ್ನು KPSC ಪ್ರಕಟಿಸಿದೆ.

SDA ಹುದ್ದೆಗಳ ನೇಮಕಾತಿಯ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ 26-08-2022 ರಂದು ಪ್ರಕಟಿಸಲಾಗಿತ್ತು.

ಆಯೋಗದ ಕೇಂದ್ರ ಕಛೇರಿ ಬೆಂಗಳೂರು ಹಾಗೂ ಪ್ರಾಂತೀಯ ವಿಭಾಗಗಳಾದ ಮೈಸೂರು, ಕಲಬುರಗಿ, ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.

ದಿ. 19-09-2022 ರಿಂದ ದಿ 01-10-2022 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೂಲ ದಾಖಲೆಗಳ ಪರಿಶೀಲನೆ ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಮೂಲ ದಾಖಲೆ ಪರಿಶೀಲನೆಯ ದಿನಾಂಕ, ಸಮಯ ಮತ್ತು ವಿಳಾಸವನ್ನು ಒಳಗೊಂಡಂತೆ ವಿಭಾಗಾವಾರು ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ದಾಖಲಾತಿ ಪರಿಶೀಲನೆ ವೇಳಾಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಈ ಕೇಳಗಿನ ಬಟನ್ ಮೇಲೆ ಕ್ಲಿಕ್‌ ಮಾಡಿ