ಪಿಎಂ ಕಿಸಾನ್‌ ಯೋಜನೆಯ 12ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ

ರೈತರಿಗೆ ಆರ್ಥಿಕವಾಗಿ ಸಹಾಯವಾಗುವ ನಿಟ್ಟಿನಲ್ಲಿ 'ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ' (ಪಿಎಂ ಕಿಸಾನ್) ಅಡಿ ನೀಡಲಾಗುವ 2,000 ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 12ನೇ ಕಂತಿನ ಹಣ ಜಮೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 12ನೇ ಕಂತಿನ ಹಣ ಜಮೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಸುಮಾರು 8 ಕೋಟಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇಕಡಾ 100 ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ.

 2018 ರ ಡಿಸೆಂಬರ್ 1 ರಂದು ಈ ಯೋಜನೆಯನ್ನು ಆರಂಭಿಸಲಾಗಿದ್ದು, 2 ಹೆಕ್ಟೇರ್​ ತನಕ ಒಟ್ಟಾರೆಯಾಗಿ ಭೂಮಿ ಇರುವ ಅಥವಾ ಮಾಲೀಕತ್ವ ಹೊಂದಿರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂ. ನೀಡಲಾಗುತ್ತದೆ.

ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್​ ಖಾತೆಗೆ ಸರ್ಕಾರ ವರ್ಗಾವಣೆ ಮಾಡುತ್ತದೆ.