ರಾಜ್ಯದ ಪದವೀಧರ ಹಾಗೂ ಡಿಪ್ಲೊಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ಪಾವತಿಸಲು “ಕರ್ನಾಟಕ ಯುವ ನಿಧಿ ಯೋಜನೆ – Yuva Nidhi Scheme” ಯನ್ನು ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂ. (ಮೂರು ಸಾವಿರ ರೂ.ಗಳು ಮಾತ್ರ) ಹಾಗೂ ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ರಂತ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ” ಯನ್ನು ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.
2023 ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀದರ ನಿರುದ್ಯೋಗಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು 3000 ರೂ (ಮೂರು ಸಾವಿರ ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ (ಒಂದು ಸಾವಿರದ ಐದುನೂರು ರೂಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “ಯುವ ನಿಧಿ ಯೋಜನೆ” ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.
Yuva Nidhi Scheme Karnataka 2023 ಷರತ್ತು ಮತ್ತು ನಿಬಂಧನೆಗಳು:
- ಪದವಿ ಹಾಗೂ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
- ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ, ಎರಡು ವರ್ಷಗಳ ಅವಧಿಯೊಳಗೆ
- ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ವಗಿತಗೊಳಿಸಲಾಗುವುದು.
- ಭತ್ಯಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
- ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯೋಜನೆಗೆ ಅರ್ಹರಾಗದೇ ಇರುವವರು..
- ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
- ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
- ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
Yuva Nidhi Scheme ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply Online (Update Soon)
ಅಧಿಕೃತ ವೆಬ್‌ಸೈಟ್: karnataka.gov.in