ಯುವನಿಧಿ ಯೋಜನೆ ಜಾರಿಗೆ ಕೂಡಿ ಬಂತು ಮುಹೂರ್ತ | Yuva Nidhi Scheme Karnataka 2023 Date

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅದರಲ್ಲೂ ನಿರುದ್ಯೋಗಿಗಳಿಗೆ ಅನುಕೂಲವಾಗಲಿರುವ ಯುವನಿಧಿ ಯೋಜನೆ (Yuva Nidhi Scheme) ಯನ್ನು ಜಾರಿ ಮಾಡಲು ಮುಹೂರ್ತ ಫಿಕ್ಸ್‌ ಮಾಡಲಾಗಿದೆ.

2023 ರ ರಾಜ್ಯ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದಿದೆ.

Yuva Nidhi Scheme Karnataka

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ನಂತರ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆಗಳನ್ನು ಐದರಲ್ಲಿ 4 ಜಾರಿ ಮಾಡಲಾಗಿದೆ. ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ.

ಮುಖ್ಯಮಂತ್ರಿಗಳು ನೀಡಿರುವ ಮಾಹಿತಿ:

“ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ನಮ್ಮ ಆಡಳಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದು ಸಿಎಂ ಸಿದ್ದರಾಮಯ್ಯನವರು ತಮ್ಮ ಸರ್ಕಾರ ಅಭಿವೃದ್ಧಿ ಪರ ಇದೆ ಎಂದು ಮಾಹಿತಿ ನೀಡಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನ

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ

ಗೃಹಲಕ್ಷ್ಮಿ DBT Status Check ಮಾಡಿ

Telegram Group Join Now
WhatsApp Group Join Now

Leave a Comment